ಶಿವಮೊಗ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.
ಕಾರಿನಲ್ಲಿ ದೊರೆತಂತ 2 ಲಕ್ಷ ಹಣದ ಬಗ್ಗೆ ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದಾಗ, ಸರಿಯಾದ ಮಾಹಿತಿಯನ್ನು ನೀಡಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 2 ಲಕ್ಷ ಹಣ ಜಪ್ತಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಎಂಸಿಸಿ ನೋಡಲ್ ಅಧಿಕಾರಿಗಳಾದ ನಾಗೇಶ್ ಬ್ಯಾಲಾಳ್, ಮಹಮ್ಮದ್ ಹನೀಫ್, ಮಾಲಿನಿ, ವಿನಾಯಕ್, ಸಬ್ ಇನ್ಸ್‌ಪೆಕ್ಟರ್ ಹೊಳಬಸಪ್ಪ ಹೊಳಿ ನೇತೃತ್ವದ ತಂಡ ಈ ಹಣವನ್ನು ಜಪ್ತಿ ಮಾಡಿದೆ.
ವರದಿ: ರಾಘವೇಂದ್ರ ತಾಳಗುಪ್ಪ, ಸಾಗರ
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್