ಶಿವಮೊಗ್ಗ: ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕವಿ ವಿ.ಟಿ.ಸ್ವಾಮಿ ಅವರ `ಸಾಗರ ಸಂಪಿಗ’ ಕವನ ಸಂಕಲನಕ್ಕೆ ಕಾವ್ಯಸಿರಿ ರಾಷ್ಟಿಯ ಪುರಸ್ಕಾರ ಲಭಿಸಿದೆ.
ಹೈದರಾಬಾದ್‌ನ ರಾಷ್ಟ್ರೀಯ ಕನ್ನಡ ಸಾಹಿತ್ಯ ಬಳಗ ಪ್ರತಿವರ್ಷ ಕನ್ನಡ ಕವನ ಸಂಕಲನಕ್ಕೆ ಕಾವ್ಯಸಿರಿ ರಾಷ್ಟಿಯ ಪ್ರಶಸ್ತಿ ನೀಡಿ ಪುರಸ್ಕರಿಸಿಕೊಂಡು ಬರುತ್ತಿದೆ. ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನವನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಗರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಟಿ.ಸ್ವಾಮಿ ಹಲವು ದಶಕಗಳಿಂದ ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬಂದಿದ್ದು ಈತನಕ 30ಕ್ಕೂ ಹೆಚ್ಚು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ.
ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಸಂಘಟನೆಗಳಲ್ಲಿ ವಿ.ಟಿ.ಸ್ವಾಮಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ. ವಿ.ಟಿ.ಸ್ವಾಮಿ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸಹೃದಯ ಬಳಗ, ಜಾನಪದ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಭಿನಂದನೆ ಸಲ್ಲಿಸಿದೆ.
ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ