ಶಿವಮೊಗ್ಗ: ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ( Hijab Row ) ತಾರಕಕ್ಕೇರಿದೆ. ಇತ್ತ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಹಿಜಾಬ್ ವರ್ಸಸ್ ಕೇಸರಿ ಶಾಲು ( Kesari Shalu ) ವಿವಾದ ತಾರಕಕ್ಕೇರಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಬಂದಿರುವಂತ ವಿದ್ಯಾರ್ಥಿಗಳು ಮುಸ್ಲೀಂ ವಿದ್ಯಾರ್ಥನಿಯರಿಗೆ ಹಿಜಾಬ್, ಬುರ್ಖಾ ತೆಗೆದು ಕಾಲೇಜು ಪ್ರವೇಶಿಸಬೇಕು. ಇಲ್ಲವಾದಲ್ಲಿ ತಮಗೂ ಕೇಸರಿ ಶಾಲು ಧರಿಸೋದಕ್ಕೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
‘ಪಬ್’ನಲ್ಲಿ ‘ಕನ್ನಡ ಕಡಗಣನೆ’ ಆರೋಪ: ‘ಕನ್ನಡಿಗರ ಕ್ಷಮೆ’ ಕೋರಿದ ‘ಡಿಜೆ ಸಿದ್ಧಾರ್ಥ್’
ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸುತ್ತಿರುವ ವಿಷಯವನ್ನು ಪೊಲೀಸರಿಗೆ ಮಾಹಿತಿಯನ್ನು ಕಾಲೇಜಿನಿಂದ ಮುಟ್ಟಿಸಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು, ಸಂಘರ್ಷ ತಾರಕಕ್ಕೇರಿದೆ. ಪರಿಸ್ಥಿತಿ ನಿಯಂತ್ರಿಸೋದಕ್ಕೆ ಪೋಲೀಸರು ಹರಸಾಹಸ ಪಡುವಂತೆ ಆಗಿದೆ.