ಶಿವಮೊಗ್ಗ : ಸೆಪ್ಟೆಂಬರ್.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಧ್ಯಾಹ್ನ 12ಕ್ಕೆ ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ ಎಂದು ಸಾಗರದ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರ್ಷ ಹೆಸರಾಂತ ಅರ್ಥಧಾರಿ ಎಂ.ಆರ್.ಲಕ್ಷ್ಮೀನಾರಾಯಣ ಅಮಚಿ ಮತ್ತು ಗಣಪತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೇಸ್ತಿç ಅವರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಲಾಗುತಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು.
ಶೃಂಗೇರಿ ಶಂಕರಮಠ ಕರ‍್ಯಾರಂಭ ಮಾಡಿ 25 ವರ್ಷ ಪೂರೈಸಿದ್ದು ಈತನಕ 50ಕ್ಕೂ ಹೆಚ್ಚು ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಿಕೊಂಡು ಬರಲಾಗುತ್ತಿದೆ. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಶೃಂಗೇರಿ ಶಂಕರಮಠದ ಮಾರ್ಗದರ್ಶನದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮ, ಹೋಮಗಳು ನಡೆಯುತ್ತಿದ್ದು, ಪ್ರತಿದಿನ ಸಂಜೆ ಭಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಪ್ರೊ. ಕೆ.ಆರ್.ಕೃಷ್ಣಯ್ಯ ಮಾತನಾಡಿ, ಶ್ರೀಮಠದಲ್ಲಿ ಶಂಕರ ಜಯಂತಿ ಅಂಗವಾಗಿ ಸನಾತನ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ವಿಷಯ ಕುರಿತು ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಸೆ. 29ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಒಟ್ಟು ನಾಲ್ಕು ವಿಭಾಗದಲ್ಲಿ ಸ್ಪರ್ಧೆ ನಡೆದಿದ್ದು, ಪ್ರಥಮ, ದ್ವಿತೀಯ, ತೃತೀಯ ಹಾಗೂ ಇಬ್ಬರಿಗೆ ಸಮಾಧಾನಕರ ಬಹುಮಾನ ನೀಡಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡವರು ಬಹುಮಾನ ಸ್ವೀಕರಿಸಲು ಮನವಿ ಮಾಡಿದರು.
ಗೋಷ್ಟಿಯಲ್ಲಿ ಮಾ.ಸ.ನಂಜುಂಡಸ್ವಾಮಿ, ಅಬಸೆ ದಿನೇಶಕುಮಾರ್ ಜೋಷಿ, ಡಾ. ಕೆಳದಿ ವೆಂಕಟೇಶ್ ಜೋಯ್ಸ್, ವಿನಾಯಕ ಜೋಯ್ಸ್, ಜ್ಯೋತಿ ಮಣೂರು, ನೇತ್ರ ಉಡುಪ ಹಾಜರಿದ್ದರು.
KMF ಹಾಲು ಉತ್ಪಾದಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಸಾಗರ ತಾಲ್ಲೂಕು ಅಧ್ಯಕ್ಷ ನಾಗರಾಜ್
SHOCKING : ಎದೆಹಾಲು ಕುಡಿಯುವಾಗಲೇ ಉಸಿರುಗಟ್ಟಿ ಒಂದೂವರೆ ತಿಂಗಳ ಮಗು ಸಾವು.!