ಶಿವಮೊಗ್ಗ: ಜಿಲ್ಲೆಯ ವಿಶೇಷ ಭೂಸ್ವಾಧೀನ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವಂತ ಸಿದ್ದಲಿಂಗರೆಡ್ಡಿ ಅವರು 40 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗದ ನಗರದ ನೆಹರು ಕ್ರೀಡಾಂಗಣದ ಬಳಿಯಲ್ಲಿ 40 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಹಿಡಿದಿದ್ದಾರೆ.
ಕಾರಿನ ಬಾಡಿಗೆ ಬಿಲ್ ಬಿಡುಗಡೆ ಮಾಡೋದಕ್ಕೆ ಮಾಲೀಕ ಕೇಶವಮೂರ್ತಿ ಬಳಿ 40 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಿಬ್ಬಂದಿ ಮೂಲಕ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನ ಅಧಿಕಾರಿ ಸಿದ್ದಲಿಂಗರೆಡ್ಡಿ ಹಾಗೂ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








