ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ, ಇವರ ಸಂಯಕ್ತಾಶ್ರಯದಲ್ಲಿ ಜ.21 ರ ಬೆಳಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಘನ ಉಪಸ್ಥಿತಿ ಇರಲಿದೆ.
ಶಾಸಕರಾದ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಮೊಗವೀರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಸಚಿವರು ಮತ್ತು ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಶೈಲ.ಸಿ. ಹರಹಂಚಿ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
BIG NEWS: ಕೇಂದ್ರದಿಂದ ಬಿಗ್ ಶಾಕ್: 15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿ ರದ್ದು
BIGG NEWS: ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ; ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ: ಡಿಕೆಶಿ