ಶಿವಮೊಗ್ಗ: ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ನಾಟ ಕಡಿತಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಹಾಗೂ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜಂಟಿ ಕಾರ್ಯಾಚರಣೆ ನಡೆಸಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ನಾಟಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಅವರು ಮಾಹಿತಿ ನೀಡಿದ್ದು, ಉಳ್ಳೂರು ವ್ಯಾಪ್ತಿಯ ಅರಣ್ಯಯ ಸರ್ವೇ ನಂಬರ್.5ರಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿದ್ದರ ಬಗ್ಗೆ ಪ್ರಕರಣ ದಾಖಲಿಸಾಗಿತ್ತು. ಈ ಸಂಬಂಧ ಇಲಾಖೆಯಿಂದ ತನಿಖೆಯನ್ನು ಕೈಗೊಳ್ಳಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜೊತೆಗೂಡಿ ಜಂಟಿ ಕಾರ್ಯಾಚರಣೆ ನಡೆಸಿ, ಕಡಿತಲೆ ಮಾಡಿದಂತ ಸಾಗುವಾನಿ ಮರದ ನಾಟ ಹಾಗೂ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಸಾಗುವಾನಿ ಮರಗಳನ್ನು ಕಡಿತಲೆ ಮಾಡಿ ಅಕ್ರಮವಾಗಿ ಸಾಗಿಸಿದಂತ ಆರೋಪದಡಿ ದಾಖಲಾಗಿದ್ದಂತ ದೂರಿನ ಹಿನ್ನಲೆಯಲ್ಲಿ ಆರೋಪಿ ಕಣಕಿ ಗೌಡ್ರು ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಈ ಮೂಲಕ ಉಳ್ಳೂರು ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಪ್ರಕರಣವನ್ನು ಬೇಧಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಹೆಗ್ಗೋಡು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುರೇಂದ್ರ ಬಡಿಗೇರ್ ಹಾಗೂ ಗಸ್ತು ಅರಣ್ಯ ಪಾಲಕರಾದಂತ ಸುಮಿತ್ರ ಭಾಗಿಯಾಗಿದ್ದಾಗಿ ತಿಳಿದು ಬಂದಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
Good News: ‘ಪೌರಕಾರ್ಮಿಕ’ರಿಗೆ ಸಿಹಿಸುದ್ದಿ: ಮಾರ್ಚ್ ಅಂತ್ಯದೊಳಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ