ಶಿವಮೊಗ್ಗ: ಸಾಗರದ ಲಿಂಗದಹಳ್ಳಿ ಬಳಿಯಲ್ಲಿರುವಂತ ರಾಮಕೃಷ್ಣ ವಸತಿ ಶಾಲೆಯಲ್ಲಿ ನಾಳೆ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗಿಯಾಗಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದಂತ ದೇವರಾಜ್ ಮಾಹಿತಿ ಹಂಚಿಕೊಂಡರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದಿನಾಂಕ 14-09-2025ರ ಭಾನುವಾರದಂದು ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸತೀಶ್ ಅವರನ್ನು ಕರೆಯಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ನಮ್ಮ ಶಾಲೆ ವತಿಯಿಂದ ಮಾಡಲಾಗಿತ್ತು ಎಂದರು.
ನಾಳೆ ಬೆಳಗ್ಗೆ 11 ಗಂಟೆಗೆ ಎಂಎಲ್ ಹಳ್ಳಿಯ ಶಾಲಾ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಾಧೀಶರಾದಂತ ಸಂತೋಷ್ ಹೆಗಡೆ ಅವರು ಉದ್ಘಾಟಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ರಾಷ್ಟ್ರ ಸೇವಾ ಯೋಧರಿಗೆ ಸನ್ಮಾನವನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ತಾವೇ ವಹಿಸಿಕೊಳ್ಳುವುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಚಿಕ್ಕಮಗಳೂರಿನ ಯುವ ಸ್ಪೂರ್ತಿ ಅಕಾಡೆಮಿಯ ಅಧ್ಯಕ್ಷ ಸಿ.ಬಿ ಸುಂದರೇಶ್ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರದ ತಾಲ್ಲೂಕು ಕೋರ್ಟ್ ನ ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಧೀಶರಾದಂತ ನಟರಾಜ್.ಎಸ್, ಪ್ರಧಾನ ಕಿರಿಯ ವ್ವಹಾರ ನ್ಯಾಯಾಧೀಶರಾದಂತ ಮಾದೇಶ್.ಎಂ.ವಿ, ಹೆಚ್ಚುವರಿ ಕಿರಿಯ ವ್ಯವಹಾರ ನ್ಯಾಯಾಧೀಶರಾದಂತ ಚಾಂದಿನಿ ಯು.ಬಿ, ಸಾಗರ ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಢಾಧಿಕಾರಿ ಡಾ.ಬೆನಕ ಪ್ರಸಾದ್, ತಹಶೀಲ್ದಾರ್ ರಶ್ಮಿ ಹೆಚ್.ಜೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್.ಈ, ಕಾರ್ಯನಿರ್ವಹಣಾಧಿಕಾರಿ ಗುರುಕೃಷ್ಣ ಶಣೈ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಬಿ ಗಿರೀಶ್ ಗೌಡ, ಸಾಗರ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಹಾಬಲೇಶ್ವರ ಎಸ್.ಎನ್, ಸದ್ಗುರು ಫೌಂಡೇಶನ್ ಡಾ.ಟಿಎನ್ ಜಗದೀಶ್ ಭಾಗವಹಿಸಲಿದ್ದಾರೆ ಎಂದರು.
1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾಳೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸುಪ್ರೀಂ ಕೋರ್ಟ್ ಮತ್ತು ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ನಡೆಸಲಿದ್ದಾರೆ. ಸಮಸ್ಯೆಗೆ ಪರಿಹಾರ ಸೂಚಿಸುವಂತ ಕೆಲಸವನ್ನು ಮಾಡಲಿದ್ದಾರೆ. ಈಗಾಗಲೇ ನಮ್ಮ ಶಾಲೆಯ ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್, ಸಾಧು-ಸಂತರು ಆಗಿದ್ದಾರೆ. ಆಧ್ಯಾತ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಶ್ರೀ ರಾಮಕೃಷ್ಣ ವಸತಿ ಶಾಲೆಯ ಪ್ರಾಂಶುಪಾಲೆ ಸರೀತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಒಳ್ಳೆಯ ಸಂಸ್ಕೃತಿ ನಿರ್ಮಾಣಕ್ಕೆ ನಮ್ಮ ಶಾಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ ವಿದ್ಯಾರ್ಥಿಗಳಲ್ಲಿ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮದಲ್ಲಿ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಸಂವಾದ ಕೂಡ ನಡೆಸಲಿದ್ದಾರೆ. ಸಾಗರ ತಾಲ್ಲೂಕಿನ ಜನರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.
ಈ ಸುದ್ದಿಗೋಷ್ಠಿಯಲ್ಲಿ ಸುಂದರೇಶ್, ಮುಖ್ಯ ಶಿಕ್ಷಕ ಲೋಕೇಶ್, ರವಿಶಂಕರ್ ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಶಿವಮೊಗ್ಗ: ಸಾಗರದಲ್ಲಿ ನವಚೇತನ ವೇದಿಕೆಯಿಂದ ಪ್ರಬಂಧ ಸ್ಪರ್ಧೆ, ವಿಜೇತರ ಹೆಸರು ಘೋಷಣೆ