Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಮೂರು ದಿನಗಳ ‘ಸಹ್ಯಾದ್ರಿ ಸಡಗರ’ಕ್ಕೆ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಚಾಲನೆ
KARNATAKA

ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಮೂರು ದಿನಗಳ ‘ಸಹ್ಯಾದ್ರಿ ಸಡಗರ’ಕ್ಕೆ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಚಾಲನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಬೋಧಕ – ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ, ಸಾಮರ್ಥ್ಯ ಮತ್ತು ಉತ್ಪಾದಕತೆಗಳು ವೃದ್ಧಿಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು “ಸಹ್ಯಾದ್ರಿ ಸಡಗರ” ಉತ್ಸವದ ಅಡಿ ಸೇ. 26-28ರವರೆಗೆ ವಿವಿಯಲ್ಲಿ ಆಯೋಜಿಸಲಾಗಿದೆ. ಜಾಥಾದೊಂದಿಗೆ ಹೆಜ್ಜೆಹಾಕುವ ಮೂಲಕ ಕುಲಪತಿಗಳು ಚಾಲನೆ ನೀಡಿ ಮಾತನಾಡಿದರು.

ವಿಶ್ವವಿದ್ಯಾಲಯವು ಉನ್ನತ ಮಟ್ಟದ ಸಂಸ್ಥೆಯಾಗಿದ್ದು ಇಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ಸಹ್ಯಾದ್ರಿ ಸಡಗರದ ಮೂಲಕ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ಬೆಸೆಯುವ, ಬೆಳೆಸುವ ವೇದಿಕೆ ಒದಗಿಸಲಾಗಿದೆ. ಒಟ್ಟಿಗೆ ಕೆಲಸ ಮಾಡುವ ಮೂಲಕ ವಿವಿಯನ್ನು ಎತ್ತರಕ್ಕೆ ಕೊಂಡೊಯ್ಯಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿವಿಯ ಆಡಳಿತಂಗ ಕುಲಸಚಿವ ಎ ಎಲ್ ಮಂಜುನಾಥ್ ಮತ್ತು ಪರೀಕ್ಷಾಂಗ ಕುಲಸಚಿವ ಪ್ರೊಫೆಸರ್ ಎಸ್ ಎಂ ಗೋಪಿನಾಥ್, ವಿಶ್ವವಿದ್ಯಾಲಯದ ಪಠ್ಯತರ ಚಟುವಟಿಕೆಯ ವಿಭಾಗದ ಸಂಚಾಲಕ ಡಾ. ನಲ್ಲಿಕಟ್ಟೆ ಸಿದ್ದೇಶ್ ಮಾತನಾಡಿದರು. ವಿವಿಯ ಎಲ್ಲ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ತಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಯಲ್ಲಿ ಸಂಭ್ರಮದ ವಾತಾವರಣ

ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಆಯೋಜಿಸಲಾಗಿರುವ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವು ಕ್ಯಾಂಪಸ್‌ನಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದೆ.

ಬೆಳಿಗ್ಗೆ 10ಗಂಟೆಗೆ ನಡೆದ ಆಕರ್ಷಕ ಜಾಥಾ ಮತ್ತು ಪಥಸಂಚಲನದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನೊಳಗೊAಡ 15ಕ್ಕೂ ಹೆಚ್ಚು ತಂಡಗಳು ಆಕರ್ಷಕ ಉಡುಪು, ವಿಷಯಗಳೊಂದಿಗೆ ಭಾಗವಹಿಸಿ ಉತ್ಸವಕ್ಕೆ ಮೆರಗು ತಂದವು.

ಜಾಥಾದ ನಂತರ ಕ್ರಿಕೆಟ್ ಪಂದ್ಯ ಆರಂಭವಾಗಿದ್ದು, ಕುಲಪತಿಗಳ ತಂಡ ಮತ್ತು ಕುಲಸಚಿವರು ತಂಡಗಳು ಮೊದಲ ಪಂದ್ಯ ಆಟವಾಡಿದವು. ವಿವಿಧ ನಿಖಾಯಗಳ ತಂಡಗಳು ನಂತರ ಕ್ರಿಕೆಟ್ ಆಡಿದವು. ನಂತರ ಮೈದಾದನದಲ್ಲಿ ಓಟ, ಶಾಟ್‌ಪುಟ್ ಎಸೆತ, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟದಂತಹ ಹೊರಾಂಗಣ ಸ್ಪರ್ಧೆಗಳು ನಡೆದರೆ, ನಾಲ್ಕು ವೇದಿಕೆಗಳಲ್ಲಿ ನಾಟಕ, ಪ್ರಹಸನ, ಜನಪದ ನೃತ್ಯ, ಏಕವ್ಯಕ್ತಿ ಗಾಯನ, ರಂಗೋಲಿ ಹಾಕುವುದು ಸೇರಿದಂತೆ ದಿನವಿಡೀ ಇಪ್ಪತ್ತಕ್ಕೂ ಹೆಚ್ಚು ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಬಿಸಿಲಿನ ತಾಪವನ್ನು ಲೆಕ್ಕಿಸದೆ ಆಟೋಟ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಇಲ್ಲಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಜನಪ್ರಿಯ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ‘ಚಾನೆಲ್’ಗಳನ್ನು ಹ್ಯಾಕ್: ಹೆಸರು ಬದಲಿಸಿ, ವೀಡಿಯೊ ಡಿಲಿಟ್

BREAKING: ‘ಗ್ರಾಮೀಣ ಪತ್ರಕರ್ತ’ರಿಗೆ ಭರ್ಜರಿ ಸಿಹಿಸುದ್ದಿ: ‘ಉಚಿತ ಬಸ್ ಪಾಸ್’ ವಿತರಣೆಗೆ ‘ರಾಜ್ಯ ಸರ್ಕಾರ’ ಆದೇಶ | Journalist Bus Pass

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.