ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸೊರಬ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೇಲ್ ಜಿ.ಎಲ್ ಅವರು, ದಿನಾಂಕ 11-07-2024ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಹೆಚ್ ಪಿಆರ್ ಆರ್ ನರ್ಸಿಂಗ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಜಾಥಾ ಮತ್ತು ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಅಂತ ತಿಳಿಸಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳ ಹೆಮ್ಮೆ ಎನ್ನುವ ಘೋಷವಾಕ್ಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಜಾಥಾ ಬಳಿಕ ಸೊರಬದ ಸ್ತ್ರೀಶಕ್ತಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೊರಬ ತಹಶೀಲ್ದಾರ್ ಮಂಜುಳ ಹೆಗಡಾಳ್, ಇಓ ಡಾ.ಪ್ರದೀಪ್, ಪುರಸಭೆಯ ಮುಖ್ಯಾಧಿಕಾರಿ ಬಾಲಚಂದ್ರ ಹಾಜರಿದ್ದಾರೆ ಅಂತ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸೊರಬ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯವಾದಿಗಳಾದಂತ ವೈ.ಜಿ ಪುಟ್ಟಸ್ವಾಮಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಕೆಎಸ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್.ಸಿ, ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಭು ಕೆ.ಎಸ್ ಉಪಸ್ಥಿತರಾಗಿರಲಿದ್ದಾರೆ ಅಂತ ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ರಾಜ್ಯದಲ್ಲಿ ಮತ್ತೊಂದು ‘ಕೀಚಕ ಕೃತ್ಯ’: ಡ್ರಾಫ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ‘ದುರುಳ’ರಿಂದ ಅತ್ಯಾಚಾರ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!