ಶಿವಮೊಗ್ಗ : ಬೆಂಗಳೂರಿನಿಂದ ಶಿವಮೊಗ್ಗದ ಅಬ್ಬಿ ಜಲಪಾತಕ್ಕೆ ಪ್ರವಾಸಕ್ಕೆ ಎಂದು ತೆರಳಿದ್ದ 12 ಜನರ ಯುವಕರ ಗುಂಪೋಂದು, ಅಬ್ಬಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಜಲಪಾತದಲ್ಲಿ ಸೆಲ್ಫಿ ಕ್ರೇಜಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ವಿನೋದ್ (26) ನೀರು ಪಾಲಾಗಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಈ ದುರ್ಘಟನೆ ಸಂಭವಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಮೃತಪಟ್ಟಿದ್ದಾನೆ. ಜಲಪಾತ ನೋಡಲು 12 ಯುವಕರು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದರು ನೀರು ಪಾಲಾಗಿರುವ ಯುವಕ ವಿನೋದ್ ಮೂಲತಃ ಬಳ್ಳಾರಿಯವರು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ಮೃತ ದೇಹಕ್ಕಾಗಿ ಶೋಧ ಕಾರ್ಯ ಈಗ ಮುಂದುವರೆದಿದೆ.ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.