Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

NEET UG 2026 ಪರೀಕ್ಷೆ ರದ್ದತಿ ಬೆನ್ನಲ್ಲೇ ಬಿಗ್ ಟ್ವಿಸ್ಟ್: NTA ಬದಲಾವಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ!

​ಮಗುವಿನ ಪೌಷ್ಟಿಕಾಂಶ ಮತ್ತು ಭಾವನಾತ್ಮಕ ಅಗತ್ಯಕ್ಕೆ ತಾಯಿಯೇ ಆಸರೆ; ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!
KARNATAKA

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಶರಣರ ನಾಡು, ಸೂಫಿ ಸಂತರ ಬೀಡು ಬೀದರ್‌ನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿದ 40ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡಿದೆ. ಈ ಯಶಸ್ಸಿನ ಸಡಗರದ ನಡುವೆಯೇ ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಸಂಘಟನೆಗೆ ಹೊಸ ಹುರುಪು ಬಂದಿದೆ. ಸಂಘದ ರಾಜ್ಯ ನಿರ್ದೇಶಕರಾಗಿ ಶಿವಮೊಗ್ಗದ ಎನ್. ರವಿಕುಮಾರ್ ಅವರು ನೇಮಕಗೊಂಡಿರುವುದು ಜಿಲ್ಲೆಯ ಪತ್ರಕರ್ತ ವಲಯದಲ್ಲಿ ಹೊಸ ಆಶಾವಾದ ಮೂಡಿಸಿದೆ.

ಸಮ್ಮೇಳನ ಯಶಸ್ವಿ: ಎನ್. ರವಿಕುಮಾರ್ ಹರ್ಷ

ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪತ್ರಕರ್ತ ಸ್ನೇಹಿತರಿಂದ ಹಾರ್ದಿಕ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ರಾಜ್ಯ ನಿರ್ದೇಶಕ ಎನ್. ರವಿಕುಮಾರ್, “ಬೀದರ್‌ನಲ್ಲಿ ನಡೆದ ಸಮ್ಮೇಳನವು ಅತ್ಯಂತ ಅಚ್ಚುಗಟ್ಟಾಗಿ ಮತ್ತು ವ್ಯವಸ್ಥಿತವಾಗಿ ಮೂಡಿಬಂದಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಈ ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು ಹೆಮ್ಮೆಯ ವಿಷಯ,” ಎಂದರು.

ತಮ್ಮ ಹೊಸ ಜವಾಬ್ದಾರಿಯ ಕುರಿತು ಮಾತನಾಡುತ್ತಾ, “ಸಂಘಟನೆಯು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಎಲ್ಲರ ಸಹಕಾರದೊಂದಿಗೆ ಉಳಿಸಿಕೊಳ್ಳುತ್ತೇನೆ. ಈಗಾಗಲೇ ಜಿಲ್ಲಾ ಪ್ರತಿನಿಧಿಯಾಗಿ ಕೆ.ವಿ. ಶಿವಕುಮಾರ್ ಅವರು ರಾಜ್ಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ನನ್ನ ನೇಮಕದಿಂದಾಗಿ ಜಿಲ್ಲೆಗೆ ರಾಜ್ಯ ಸಂಘದಲ್ಲಿ ಇಬ್ಬರು ನಿರ್ದೇಶಕರ ಬಲ ಸಿಕ್ಕಂತಾಗಿದೆ. ಈ ಅವಕಾಶವನ್ನು ಬಳಸಿಕೊಂಡು ಸಂಘಟನೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯೋಣ,” ಎಂದು ಕರೆ ನೀಡಿದರು.

ಜಿಲ್ಲಾ ಸಂಘಟನೆಗೆ ‘ಡಬಲ್ ಇಂಜಿನ್’ ಆಡಳಿತ: ಹೆಚ್.ಯು. ವೈದ್ಯನಾಥ್ ವಿಶ್ಲೇಷಣೆ

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಯು. ವೈದ್ಯನಾಥ್, ಸಂಘಟನೆಯ ಬೆಳವಣಿಗೆಯನ್ನು ‘ಡಬಲ್ ಇಂಜಿನ್ ಆಡಳಿತ’ಕ್ಕೆ ಹೋಲಿಸಿದರು. “ಎನ್. ರವಿಕುಮಾರ್ ಅವರು ಸುದೀರ್ಘ ಕಾಲದಿಂದ ಜಿಲ್ಲೆ ಮತ್ತು ರಾಜ್ಯ ಸಂಘಟನೆಯ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದಾರೆ. ಅವರ ಅನುಭವ ಈಗ ರಾಜ್ಯ ನಿರ್ದೇಶಕ ಸ್ಥಾನದ ಮೂಲಕ ಸಂಘಟನೆಗೆ ದೊಡ್ಡ ಆಸ್ತಿಯಾಗಲಿದೆ,” ಎಂದರು.

“ಕೆ.ವಿ. ಶಿವಕುಮಾರ್ ಮತ್ತು ಎನ್. ರವಿಕುಮಾರ್ ಎಂಬ ಇಬ್ಬರು ಸಮರ್ಥ ನಾಯಕರು ರಾಜ್ಯ ಮಟ್ಟದಲ್ಲಿ ನಮ್ಮ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವುದು ನಮಗೆ ‘ಡಬಲ್ ಇಂಜಿನ್’ ಬಲ ಬಂದಂತಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ವೈಶಿಷ್ಟ್ಯಪೂರ್ಣ ಹಾಗೂ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಕರ್ತರ ಒಗ್ಗಟ್ಟಿನ ಪ್ರದರ್ಶನ

ಈ ಸಂಭ್ರಮದ ಸಂದರ್ಭದಲ್ಲಿ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳಾದ ದೇಶಾದ್ರಿ (ಉಪಾಧ್ಯಕ್ಷ), ರೋಹಿತ್ (ಕೋಶಾಧ್ಯಕ್ಷ), ದೀಪಕ್ ಸಾಗರ್ (ಕಾರ್ಯದರ್ಶಿ), ನಿರ್ದೇಶಕರಾದ ರಂಜಿತ್, ಆರುಂಡಿ ಶ್ರೀನಿವಾಸ್ ಹಾಗೂ ಹಿರಿಯ ಪತ್ರಕರ್ತ ನಾಗೇಶ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೂತನ ನಿರ್ದೇಶಕರಿಗೆ ಶುಭ ಹಾರೈಸಿದರು.

ಒಟ್ಟಾರೆಯಾಗಿ, ಬೀದರ್ ಸಮ್ಮೇಳನದ ಯಶಸ್ಸು ಮತ್ತು ಸಂಘಟನೆಯಲ್ಲಿ ಶಿವಮೊಗ್ಗಕ್ಕೆ ಸಿಕ್ಕ ಹೆಚ್ಚಿನ ಪ್ರಾತಿನಿಧ್ಯವು ಜಿಲ್ಲೆಯ ಪತ್ರಕರ್ತರ ಹಿತರಕ್ಷಣೆ ಮತ್ತು ವೃತ್ತಿಪರ ಚಟುವಟಿಕೆಗಳಿಗೆ ಹೊಸ ವೇಗ ನೀಡುವ ಸೂಚನೆ ನೀಡಿದೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ಬೆಂಗಳೂರು– ರೂಪ್ಸಾ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

NEET UG 2026 ಪರೀಕ್ಷೆ ರದ್ದತಿ ಬೆನ್ನಲ್ಲೇ ಬಿಗ್ ಟ್ವಿಸ್ಟ್: NTA ಬದಲಾವಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ!

​ಮಗುವಿನ ಪೌಷ್ಟಿಕಾಂಶ ಮತ್ತು ಭಾವನಾತ್ಮಕ ಅಗತ್ಯಕ್ಕೆ ತಾಯಿಯೇ ಆಸರೆ; ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.