ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೈಸೂರಿನ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವಂತ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಇಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆಗೈದಂತ ಆರೋಪಿ ರವಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದನಂತೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಿಂದಿನ ಕಾರಣ ಸದ್ಯಕ್ಕೆ ತಿಳಿದು ಬಂದಿದಲ್ಲ. ಈ ಸಂಬಂಧ ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
BREAKING : ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ
ರೈತರೇ ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಬೆಳೆ ವಿಮೆʼ ಪರಿಹಾರ








