Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು: ಗಣ್ಯರ ಶ್ಲಾಘನೆ
KARNATAKA

ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು: ಗಣ್ಯರ ಶ್ಲಾಘನೆ

By kannadanewsnow0919/12/2025 8:05 PM

ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು.

ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುಕ್ಕಾಣಿ ಹಿಡಿದು, ಆ ಮೂಲಕ ಪತ್ರಕರ್ತರ ಸಮುದಾಯಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಸಮಾರಂಭದಲ್ಲಿ ಸ್ಮರಿಸಿ ಅಭಿನಂದಿಸಲಾಯಿತು.

ಬೆಂಗಳೂರು ನಾಗರೀಕರ ವೇದಿಕೆ ಮತ್ತು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟಸ್ಟ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಶಿವಾನಂದ ತಗಡೂರು ಅವರಿಗೆ ಹಮ್ಮಿಕೊಂಡಿದ್ದ ನಾಗರೀಕ ಸನ್ಮಾನ ಮತ್ತು ಲೋಹಿಯಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಗಡೂರು ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗಾಂಧಿಭವನದ ಅಧ್ಯಕ್ಷ ಮತ್ತು ಶಿಕ್ಷಣ ತಜ್ಞ ನಾಡೋಜ ಡಾ.ವೂಡೇ ಪಿ.ಕೃಷ್ಣ ಮಾತನಾಡಿ, ಮುಖ್ಯವಾಹಿನಿ ಮಾಧ್ಯಮವು ಇಂದಿಗೂ ತನ್ನ ಗಟ್ಟಿತನದ ಮೂಲಕ ಘನತೆಯನ್ನು ಉಳಿಸಿಕೊಂಡು ಬಂದಿದೆ. ಇದೇ ನಮಗೆಲ್ಲ ಆಶಾದಾಯಕ ಬೆಳವಣಿಗೆ ಎಂದರು.

ರಾಮಮನೋಹರ ಲೋಹಿಯಾ ಅವರು ದೇಶದ ರಾಜಕಾರಣದಲ್ಲಿ ಚಲನೆಯನ್ನು ತಂದವರು. ಲೋಹಿಯಾ ವಾದದಲ್ಲಿ ಬೆಳೆದು ಅರಳಿದ ಪ್ರತಿಭೆಗಳು ದೇಶ ಉದ್ದಗಕ್ಕೂ ಇದ್ದಾರೆ. ಅವರ ಹೆಸರಿನ ಪ್ರಶಸ್ತಿಯನ್ನು ಶಿವಾನಂದ ತಗಡೂರು ಅವರಿಗೆ ನೀಡುತ್ತಿರುವುದು ಅಭಿನಂದನೀಯ ಮತ್ತು ನಮಗೆಲ್ಲರಿಗೂ ಹೆಮ್ಮೆ ಎಂದರು.

ಸಂಘಟನೆ, ಸಂಸ್ಕಾರ, ಸೇವೆ ವ್ಯಕ್ತಿಯ ಸಾಧನೆಗೆ ಮುಖ್ಯ. ಇನ್ನೊಬ್ಬರ ಸೇವೆಯಲ್ಲಿ ನಮ್ಮನ್ನು ನಾವು ಕಳೆದುಕೊಳ್ಳುವುದೇ ಸಾರ್ಥಕ ಬದುಕು. ಅಂತಹ ವ್ಯಕ್ತಿತ್ವದ ತಗಡೂರು ಇನ್ನಷ್ಟು ಎತ್ತ=ರಕ್ಕೆ ಬೆಳೆಯಲಿ ಎಂದು ಆಶಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ಟ ಐನಕೈ ಅವರು, ಪತ್ರಕರ್ತರನ್ನು ಟೀಕೆ ಮಾಡುವವರೆ ಹೆಚ್ಚು. ಆದರೆ ಪತ್ರಕರ್ತರಿಗೆ ನಾಗರಿಕ ಸನ್ಮಾನ ಮಾಡುತ್ತಿರುವುದು ಅತ್ಯಂತ ಅಪರೂಪ. ಲೋಹಿಯಾ ಪ್ರಶಸ್ತಿಗಿಂತಲೂ ಈ ನಾಗರೀಕ ಸನ್ಮಾನ ಮುಖ್ಯವಾದದ್ದು. ಇದಕ್ಕೆ ಭಾಜನರಾಗಿರುವ ಶಿವಾನಂದ ತಗಡೂರು ನಿಜಕ್ಕೂ ಅಭಿನಂದನೀಯ ಎಂದರು.

ಅಭಿನಂದನಾ ಭಾಷಣ ಮಾಡಿದ ಕನ್ನಡಪ್ರಭ ಸಂಪಾದಕ ರವಿಹೆಗಡೆ, ಪತ್ರಿಕೋದ್ಯಮದಲ್ಲಿರುವ ಎಡ ಬಲದ ಸಂಘರ್ಷದ ನಡುವೆ ಯಾವುದಕ್ಕೂ ಅಂಟಿಕೊಳ್ಳದೆ ತಗಡೂರು ಸೇವೆ ಸಲ್ಲಿಸುತ್ತಿರುವುದನ್ನು ನಾನು ಹತ್ತಿರದಿಂದ ನೋಡಿರುವ. ಎಲ್ಲಕ್ಕಿಂತಲೂ ಮೊದಲು ಮಾನವೀಯತೆಯೇ ನಿಜವಾದ ಪತ್ರಕರ್ತನ ಜವಾಬ್ದಾರಿ ಎನ್ನುವುದನ್ನು ಅರಿತು ಆ ನಿಟ್ಟಿನಲ್ಲಿಯೇ ಪತ್ರಕರ್ತರ ಸಂಘಟನೆಯನ್ನು ರೂಪಿಸಿ ನಡೆಸುತ್ತಿರುವುದು ವಿಶೇಷ ಎಂದು ಅವರ ಸೇವೆ ಸ್ಮರಿಸಿದರು.

ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಪತ್ರಕರ್ತರಿಗೆ ಹಗಲಿರಳು ನೆರವಾಗುವ ಮೂಲಕ ತಮ್ಮ ಹೊಣೆಗಾರಿಕೆಯನ್ನು ಮೆರೆದಿದ್ದ ತಗಡೂರು ಅವರನ್ನು ಗೌರವಿಸಲು ಇದು ನಮಗೆ ಸಿಕ್ಕ ಅವಕಾಶ ಎಂದರು.

ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ ಮಾತನಾಡಿ, ಹಿರಿಯ ಪತ್ರಕರ್ತರನ್ನು ಅವರ ಮನೆಯ ಅಂಗಳದಲ್ಲಿ ಅಭಿನಂದಿಸುವ ಕೆಲಸ ಮಾಡಿದ ತಗಡೂರು ಅಭಿನಂದನೀಯ ಎಂದರು.

ಈ ಕಾರ್ಯಕ್ರಮದ ಸಂಯೋಜಕ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಸ್ವಾಗತಿಸಿದರು.

ಭೂಮಿ ಫೌಂಡೇಶನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ವಿತರಕರ ಸಂಘ, ರಂಗಸಿರಿ ಬಳಗ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಶಿವಾನಂದ ತಗಡೂರು ಅವರನ್ನು ಅಭಿನಂದಿಸಲಾಯಿತು.

BIG NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM1 Min Read

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM1 Min Read

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM2 Mins Read
Recent News

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರ: ರೋಹಿತ್ ಶರ್ಮಾ ದಾಖಲೆ ಪುಡಿಪುಡಿ ಮಾಡಿದ ‘ಕಿಂಗ್ ಕೊಹ್ಲಿ’!

05/04/2026 9:15 PM
State News
KARNATAKA

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

By kannadanewsnow0905/04/2026 9:28 PM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು…

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

05/04/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.