ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಆಮನೂರು ಶಿವೈಕ್ಯರಾದಂತೆ ಆಗಿದೆ. ಆ ಮೂಲಕ ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ.
ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು.
ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ನಡೆಸಲಾಯಿತು. ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥೀವ ಶರೀರಕ್ಕೆ ಅಭಿಷೇಕ ನೆರವೇರಿಸಲಾಯಿತು. ಅಂದರೇ ಮಣ್ಣು ಹಾಕದೇ ಕ್ರೀಯಾ ಸಮಾಧಿಯಲ್ಲಿ ವಿಭೂತಿಯನ್ನು ಹಾಕಲಾಯಿತು.
ಪಂಚಪೀಠಾಧಿಪತಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಶಿವೈಕ್ಯರಾಗಿದ್ದಾರೆ. ಹೀಗಾಗಿ ಕೊಡುಗೈ ದಾನಿ ಇನ್ನೂ ನೆನಪು ಮಾತ್ರವಾಗಿಯೇ ಉಳಿದಂತೆ ಆಗಿದೆ.
GBA ತಿದ್ದುಪಡಿ ವಿಧೇಯಕ ವಾಪಸ್ ಪಡೆಯಿರಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ
ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ








