ಶಿವಮೊಗ್ಗ : ಲೋಕಸಭಾ ಟಿಕೆಟ್ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರ ವಾಗ್ದಾಳಿ ಮುಂದುವರೆದಿದ್ದು ಇದೀಗ ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಮಾತನಾಡಿದ್ದು ಶೋಭಾ ಕರಂದ್ಲಾಜೆ ಗೆ ಹಠ ಹಿಡಿದು ಟಿಕೆಟ್ ಕೊಡಿಸಿದ ಯಡಿಯೂರಪ್ಪ ನನ್ನ ಮಗನಿಗೆ ಮೋಸ ಮಾಡಿದರು ಎಂದು ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉದ್ದೇಶಪೂರ್ವಕವಾಗಿ ಹಿಂದುತ್ವ ಹೋರಾಟಗಾರರ ಕಡೆಗಣನೆ ಮಾಡಲಾಗಿದೆ. ಪಕ್ಷಕ್ಕೆ ಸಂಬಂಧ ಇಲ್ಲದವರನ್ನು ಪದಾಧಿಕಾರಿಗಳನ್ನಾಗಿ ಮಾಡಿದ್ದಾರೆ. ಯಡಿಯೂರಪ್ಪ ಇದುವರೆಗೂ ನನ್ನ ಜೊತೆಗೆ ಮಾತುಕತೆ ನಡೆಸಿಲ್ಲ. ಇದಕ್ಕೂ ಮೊದಲು ನನ್ನ ಮಗನಿಗೆ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಶೋಭಾ ಕರಂದ್ಲಾಜೆ ಗೆ ಹಠ ಮಾಡಿ ಬಿಎಸ್ ಯಡಿಯೂರಪ್ಪ ಟಿಕೆಟ್ ಕೊಡಿಸಿದ್ದಾರೆ ಎಂದು ಕಿಡಿ ಕಾರಿದರು.
ಟಿಕೆಟ್ ಗಾಗಿ ಶೋಭಾ ಕರಂದ್ಲಾಜೆ ದೆಹಲಿಗೆ ಹೋಗಿದ್ರಾ? ನನಗೆ ಮಗನ ಟಿಕೆಟ್ ವಿಚಾರವಾಗಿ ಬಿಎಸ್ ಯಡಿಯೂರಪ್ಪ ದೆಹಲಿಗೆ ಕರೆದರು.ಆದರೆ ಟಿಕೆಟ್ ನೀಡದೇ BS ಯಡಿಯೂರಪ್ಪ ನನಗೆ ಮೋಸ ಮಾಡಿದ್ದಾರೆ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ನನಗೆ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಅನೇಕ ಕಾಂಗ್ರೆಸ್ ಜೆಡಿಎಸ್ ಮುಖಂಡರಿಂದ ಬೆಂಬಲ ವ್ಯಕ್ತವಾಗುತ್ತಿದೆ ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ ನನ್ನ ಮೇಲೆ ಪ್ರೀತಿ ಇದೆ ಕ್ಷೇತ್ರದ ಜನರಿಗೆ ನನ್ನ ಮೇಲೆ ಪ್ರೀತಿ ಇದೆ. ನನಗಾದ ಅನ್ಯಾಯಕ್ಕೆ ಎಲ್ಲರೂ ಬೆಂಬಲ ನೀಡುತ್ತಿದ್ದಾರೆ ಕುಟುಂಬ ರಾಜಕಾರಣದ ವಿರುದ್ಧ ನನ್ನ ಈ ಹೋರಾಟ ಎಂದು ತಿಳಿಸಿದರು.