ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಧಿಕೃತವಾಗಿ ಹಾಜರಾಗದ ಸಮೀಕ್ಷೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ, ರಾಜ್ಯದಾದ್ಯಂತ — ಬೆಂಗಳೂರು ನಗರವನ್ನು ಒಳಗೊಂಡಂತೆ — ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(Socio-Educational Survey) ನಡೆಯುತ್ತಿದೆ.
ಬೆಂಗಳೂರು ನಗರದಲ್ಲಿ ಸುಮಾರು 46 ಲಕ್ಷ ಮನೆಮನೆಗಳಿಗೆ ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ ಸುಮಾರು 21,000 ಸಮೀಕ್ಷಾದಾರ(Enumerators)ರನ್ನು ನಿಯೋಜಿಸಲಾಗಿದೆ.
ಈ ಸಮೀಕ್ಷಾದಾರಲ್ಲಿ 18,000 ಕ್ಕೂ ಹೆಚ್ಚು ಮಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಅವರು ಪ್ರಶಂಸೆಗೆ ಅರ್ಹರಾಗಿದ್ದಾರೆ.
ಗರ್ಭಿಣಿಯರು, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವುಳ್ಳ ತಾಯಂದಿರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಯುಳ್ಳ ಸಮೀಕ್ಷಾದಾರರನ್ನು ಸಮೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಆದರೆ, ಪ್ರತಿದಿನ ಪದೇ ಪದೇ ನೋಟೀಸ್ ಗಳು ಹಾಗೂ SMS ಮೂಲಕ ಸಂದೇಶಗಳನ್ನು ನೀಡುತ್ತಿದ್ದರೂ ಕೂಡಾ ಸುಮಾರು 2,300 ಸಮೀಕ್ಷದಾರರು ಯಾವುದೇ ಕಾರಣವಿಲ್ಲದೆ ಹಾಗೂ ಅನಧಿಕೃತವಾಗಿ ಗೈರುಹಾಜರಿದ್ದಾರೆ.
ಇಂತಹವರ ನಡೆ ಗಂಭೀರ ಶಿಸ್ತುಉಲ್ಲಂಘನೆಯಾಗಿದೆ. ಆದ್ದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಅವರ ಅನಧಿಕೃತ ಗೈರುಹಾಜರಿ ಅವಧಿಯ ವೇತನವನ್ನು “ಕೆಲಸ ಮಾಡದಿದ್ದರೆ – ವೇತನವಿಲ್ಲ”(No Work – No Pay) ತತ್ವದ ಪ್ರಕಾರ ನಿರಾಕರಿಸುವಂತೆ ಆದೇಶ ಹೊರಡಿಸಿದ್ದಾರೆ.
ಅವರು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ತಮಗೆ ಹಂಚಿಕೆಯಾಗಿರುವ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು. ಇಲ್ಲವಾದರೆ, ಅನಧಿಕೃತವಾಗಿ ಗೈರಾಗಿರುವ ಸಮೀಕ್ಷಾದಾರರ ವಿರುದ್ಧ ಪ್ರತಿದಿನ ಕ್ರಮ ಕೈಗೊಳ್ಳಲಾಗುತ್ತದೆ.
ಮುಂದುವರಿದು, ಅನಧಿಕೃತವಾಗಿ ಗೈರುಹಾಜರಾಗುವುದನ್ನು ಮುಂದುವರಿಸಿದರೆ ಅಮಾನತು ಸೇರಿದಂತೆ ಶಿಸ್ತು ಕ್ರಮಕ್ಕೆ ಸಹ ಅವರು ಹೊಣೆಗಾರರಾಗಿರುತ್ತಾರೆ ಎಂಬುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಎಚ್ಚರಿಸಿದ್ದಾರೆ.
BREAKING : ‘ಬಿಹಾರ ವಿಧಾನಸಭಾ ಚುನಾವಣೆ’ಗೆ BJP ಮೊದಲ ಪಟ್ಟಿ ಬಿಡುಗಡೆ: ’71 ಅಭ್ಯರ್ಥಿ’ಗಳ ಹೆಸರು ಘೋಷಣೆ
ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ