ಬೆಂಗಳೂರು: ನಗರದಲ್ಲಿ ಒನ್ ವೇ ರಸ್ತೆಯಲ್ಲಿ ಸಂಚರಿಸಿದಂತ ವಾಹನ ಸವಾರರಿಗೆ ಸಂಚಾರ ಪೊಲೀಸರು ಶಾಕ್ ನೀಡಿದ್ದಾರೆ. ಬರೋಬ್ಬರಿ 11,498 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಏಕಮುಖ ರಸ್ತೆಗಳಲ್ಲಿ ವಿರುದ್ಧವಾಗಿ ವಾಹನಗಳನ್ನು ಚಲಾಯಿಸುವ ಚಾಲಕರು, ಸವಾರರ ವಿರುದ್ಧ ದಿನಾಂಕ 21-01-2026ರಿಂದ ವಿಶೇಷ ಕಾರ್ಯಾಚರಣೆಯನ್ನು ನಗರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದಿದೆ.
ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ದಿನಾಂಕ 21-01-2026ರಿಂದ 24-01-2026ರವರೆಗೆ ಒಟ್ಟು 11,498 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಸಾರ್ವಜನಿಕ ಸುರಕ್ಷತಾ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಎಂಬುದಾಗಿ ತಿಳಿಸಿದೆ.








