ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3974 ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಬರೋಬ್ಬರಿ 7.61 ಲಕ್ಷ ದಂಡವನ್ನು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಂದ ವಸೂಲಿ ಮಾಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನವೆಂಬರ್-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40414 ವಾಹನಗಳನ್ನು ತನಿಖೆಗೊಳಪಡಿಸಿ 3961 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಎಂದಿದೆ.
3974 ಟಿಕೇಟ್ ರಹಿತ ಪ್ರಯಾಣಿಕರಿಂದ 7,61,334/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 99,143/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ.
ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.
ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ








