ಬೆಂಗಳೂರು: ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಫಾರಿಗೆ ತೆರಳುವಂತ ಪ್ರವಾಸಿಗರಿಗೆ ಶಾಕ್ ಎನ್ನುವಂತೆ, ನಿನ್ನೆಯಿಂದಲೇ ಜಾರಿಗೆ ಬರುವಂತೆ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.
ಈ ಕುರಿತಂತೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6:00 ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ದದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿ, ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದಿದ್ದಾರೆ.
ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ನಿಟ್ಟಿನಲ್ಲಿ ದಿನಾಂಕ 28.10.2025 ರಿಂದ ಹಾಲಿ ಇರುವ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಸೇವಾ ವಲಯವು ಆರು ವರ್ಷಗಳಲ್ಲಿ 40 ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿ: ನೀತಿ ಆಯೋಗ | Niti Aayog








