Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಡಾನ್ 3′ ವಿವಾದ: ನಟ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ನಿಷೇಧ; ಸಹಕರಿಸದಂತೆ ಕಾರ್ಮಿಕರ ಮಂಡಳಿ ಕಟ್ಟುನಿಟ್ಟಿನ ಆದೇಶ!

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

​‘ಕಾಕ್ರಾಚ್ ಜನತಾ ಪಾರ್ಟಿ’ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ‘ಪ್ರತಿಯೊಂದನ್ನೂ ಇಷ್ಟೊಂದು ಸೆಂಟಿಮೆಂಟಲ್ ಆಗಿ ತೆಗೆದುಕೊಳ್ಳಬೇಡಿ’ ಎಂದ ನ್ಯಾಯಾಲಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
KARNATAKA

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By ವಸಂತ ಬಿ ಈಶ್ವರಗೆರೆ

ಉಡುಪಿ : ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ತಳೆದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಬಾರದು ಮತ್ತು 2015ರ ನಂತರದ ಎಲ್ಲ ಒತ್ತುವರಿ ತೆರವು ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಉಡುಪಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, 2015ಕ್ಕೆ ಮೊದಲು ರಾಜ್ಯದಲ್ಲಿ ಒಟ್ಟು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ ಆಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಇದರಲ್ಲಿ ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿರುವ ಅಂದರೆ ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿರುವ ಕುಟುಂಬಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡುವ ತನಕ ತೆರವು ಮಾಡದಂತೆ ನಿರ್ಣಯಿಸಿದೆ. 3 ಎಕರೆಗಿಂತ ಹೆಚ್ಚಿನ ಒತ್ತುವರಿಯನ್ನು ತೆರವು ಮಾಡಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಸೆಕ್ಷನ್ 4 ಸಮಸ್ಯೆ ಪರಿಹರಿಸಲು ವ್ಯವಸ್ಥಾಪನಾಧಿಕಾರಿ ನೇಮಕ

ಉಡುಪಿ, ಮೇ 25: ಸೆಕ್ಷನ್ 4 ಪ್ರಕ್ರಿಯೆ ನಡೆದು, ಸೆಕ್ಷನ್ 17 ಮಾಡಿರುವ ಸುಮಾರು 2000 ಎಕರೆ ಪ್ರದೇಶವನ್ನು ಕೂಡಲೇ ಅಧಿಸೂಚಿತ ಅರಣ್ಯ ಎಂದು ದಾಖಲಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಉಡುಪಿಯಲ್ಲಿಂದು ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಅರಣ್ಯ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಂಗಳೂರು ವೃತ್ತದಲ್ಲಿ 6144.99 ಹೆಕ್ಟೆರ್ ಪ್ರದೇಶಕ್ಕೆ ಸಂಬಂಧಿಸಿದ 55 ಪ್ರಕರಣಗಳು ಸೆಕ್ಷನ್ 17 ಅಂದರೆ ಅಧಿಸೂಚಿತ ಅರಣ್ಯ ಎಂದು ಘೋಷಿಸಲು ಬಾಕಿ ಇದ್ದು, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ವ್ಯವಸ್ಥಾಪನಾಧಿಕಾರಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ 1224 ಸರ್ವೆ ನಂಬರ್ ಗಳಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯವಿದ್ದು, ಇದರಲ್ಲಿ ಸಂಪೂರ್ಣ ಡೀಮ್ಡ್ ಇರುವ 400 ಸರ್ವೆ ನಂಬರ್ ಗಳಿವೆ. ಉಳಿದ 800 ಸರ್ವೆ ನಂಬರ್ ಗಳ ಪೈಕಿ 94 ಸರ್ವೆ ನಂಬರ್ ಗಳ ಜಂಟಿ ಸರ್ವೆ ಮಾಡಲಾಗಿದೆ ಎಂದು ಸಭೆಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಕೂಡಲೇ ಹೆಚ್ಚುವರಿ ಮೋಜಿಣಿದಾರರನ್ನು ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ನಿಯೋಜಿಸಿ ಉಳಿದ ಸರ್ವೆ ನಂಬರ್ ಗಳ ಸರ್ವೆ ಕಾರ್ಯವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಕೆ.ಎಂ.ಎಲ್.ನಲ್ಲಿ ಅಳವಡಿಸುವಂತೆ ಅರಣ್ಯ ಸಚಿವರು ಸೂಚಿಸಿದರು.

ವನ್ಯಜೀವಿ – ಮಾನವ ಸಂಘರ್ಷ ತಡೆಗೆ ಸೂಚನೆ:

ಪುತ್ತೂರು, ಹೆಬ್ರಿ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ವೇಣೂರು, ಕಾರ್ಕಳ ಮೊದಲಾದ ಕಡೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಪ್ರಕರಣಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದೇ ವೇಳೆ ಶಂಕರನಾರಾಯಣ ವಲಯ ಹೆನ್ನಬಯಲು ಸೆಕ್ಷನ್ ನಲ್ಲಿ ಚಿರತೆಯೊಂದನ್ನು ಕೊಂದು ಅದರ ಕಾಲುಗಳನ್ನು ಕತ್ತರಿಸಿಕೊಂಡು ಹೋಗಿದ್ದ ದುಷ್ಕರ್ಮಿಗಳನ್ನು ಹುಡುಕಿ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಅಧಿಕಾರಿ ಸಿಬ್ಬಂದಿಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಫಿಷ್ ಮಿಲ್ ಗಳ ವಿರುದ್ಧ ಕ್ರಮಕ್ಕೆ ಸೂಚನೆ:

ಮಾಲಿನ್ಯಕಾರಕವಾದ ಫಿಷ್ ಮಿಲ್ ಗಳ ವಿರುದ್ಧ ಕ್ರಮ ವಹಿಸಲು ಸೂಚಿಸಿದ ಅರಣ್ಯ ಸಚಿವರು, ನದಿಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಿ, ಶುದ್ಧೀಕರಣ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ನಿಗಾ ಇಡುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ತ್ರಿಪಾಠಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್ ಮತ್ತು ಕಮಲಾ ಕರಿಕಳನ್ ಮತ್ತಿತರರು ಪಾಲ್ಗೊಂಡಿದ್ದರು.

BREAKING: ಡಾನ್ 3 ವಿವಾದ: ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಚಿತ್ರರಂಗದ ಒಕ್ಕೂಟದಿಂದ ನಿಷೇಧ | Ranveer Singh

ಮರಣಕ್ಕೂ 24 ಗಂಟೆಗಳ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳಿವು

Share. Facebook Twitter LinkedIn WhatsApp Email

Related Posts

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

2 Mins Read

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

2 Mins Read

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

2 Mins Read
Recent News

​’ಡಾನ್ 3′ ವಿವಾದ: ನಟ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ನಿಷೇಧ; ಸಹಕರಿಸದಂತೆ ಕಾರ್ಮಿಕರ ಮಂಡಳಿ ಕಟ್ಟುನಿಟ್ಟಿನ ಆದೇಶ!

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

​‘ಕಾಕ್ರಾಚ್ ಜನತಾ ಪಾರ್ಟಿ’ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ‘ಪ್ರತಿಯೊಂದನ್ನೂ ಇಷ್ಟೊಂದು ಸೆಂಟಿಮೆಂಟಲ್ ಆಗಿ ತೆಗೆದುಕೊಳ್ಳಬೇಡಿ’ ಎಂದ ನ್ಯಾಯಾಲಯ!

ಟ್ವಿಶಾ ಶರ್ಮಾ ಸಾವು ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ಅರ್ಜಿ ಸಲ್ಲಿಕೆ; ತನಿಖೆಯ ಲೋಪದೋಷಗಳ ಮೇಲೆ ಸುಪ್ರೀಂ ತೀವ್ರ ನಿಗಾ

State News
KARNATAKA

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಉಡುಪಿ : ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ತಳೆದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಬಾರದು…

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.