ಕೊಪ್ಪಳ : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಹಿನ್ನೆಲೆ ಕುಕನೂರು ಠಾಣೆ ಪೊಲೀಸರು ಪೋಕ್ಸೋ ಪ್ರಕರಣದ ಕಲಿಸಿಕೊಂಡು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದ ಹತ್ತನೇ ತರಗತಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿ ಬುಧವಾರ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ವಸತಿ ನಿಲಯಗಳ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಲು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮಗುವಿಗೆ ಜನ್ಮ ನೀಡಿದ ಬಾಲಕಿಯ ಆರೋಗ್ಯ ತಪಾಸಣೆಯನ್ನು ಎರಡು ತಿಂಗಳ ಹಿಂದೆ ಮಾಡಲಾಗಿದ್ದು, ಬಾಲಕಿ ಗರ್ಭಿಣಿಯಾದ ವಿಷಯವನ್ನು ವೈದ್ಯಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಆದ್ದರಿಂದ ಕರ್ತವ್ಯ ಲೋಪದ ಮೇಲೆ ಇಬ್ಬರು ವೈದ್ಯಾಧಿಕಾರಿಗಳ ಮೇಲೂ ಎಫ್‌ಐಆರ್ ದಾಖಲಾಗಿದೆ.








