ಬೆಂಗಳೂರು : ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಕಲಾಸಿಪಾಳ್ಯದಲ್ಲಿ 16 ವರ್ಷದ ಬಾಲಕಿ ಶರ್ಮಿಳಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೋಷಕರು ತಮಿಳುನಾಡಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








