ಬೆಂಗಳೂರು : ರಾಜ್ಯದಲ್ಲಿ ಕಳೆದ ಐದೂವರೆ ವರ್ಷದಲ್ಲಿ 2,13,192 ಅಪ ಘಾತಗಳು ಸಂಭವಿಸಿದ್ದು, 60, 115 ಜನ ಸಾವಿಗೀಡಾಗಿದ್ದಾರೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ ಅವರು, ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚೆಗೆ ಅಪ ಘಾತ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೂ ಇನ್ನಷ್ಟು ಕಡಿಮೆ ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 103 ಅಪಘಾತಗಳು ಸಂಭವಿಸುತ್ತಿದ್ದು, ಸರಾಸರಿ 30 ಜನ ಬಲಿಯಾಗುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಐ ಆಧಾರಿತ ಕ್ಯಾಮರಾ ಅಳವಡಿಕೆ
– @RLR_BTM , ಸಾರಿಗೆ ಸಚಿವರು pic.twitter.com/QVQUC39eUB
— DIPR Karnataka (@KarnatakaVarthe) August 13, 2025