ಉತ್ತರ ಕನ್ನಡ : ಅಂಗನವಾಡಿಯಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಾವು ಕಚ್ಚಿ 4 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮಾರಿಕಾಂಬಾ ನಗರದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ನಿನ್ನೆ ಬೆಳಗ್ಗೆ 10.30 ರ ಸುಮಾರಿಗೆ ಹೊರಗೆ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುವ ಮಾರ್ಗದಲ್ಲಿ ಹಾವು ಮಗು ಕಾಲಿಗೆ ಕಚ್ಚಿದೆ. ನಂತರ ಮಗುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯವೇ ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.