Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !
KARNATAKA

SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !

By kannadanewsnow57

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ನರ್ಸ್ನ ಬೇಜವಾಬ್ದಾರಿತನಕ್ಕೆ ಎಳೆಯ ಕಂದಮ್ಮನೊಬ್ಬನ ಬೆರಳು ತುಂಡಾಗಿರುವ ಘನಘೋರ ಘಟನೆ ಇಂದಿರಾನಗರದಲ್ಲಿ ನಡೆದಿದೆ.

ಘಟನೆಯ ವಿವರ:

ಜ್ವರ ಮತ್ತು ಕಫದ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಗಂಡು ಮಗುವನ್ನು ಪೋಷಕರು ಕಳೆದ ಫೆಬ್ರವರಿ 19ರಂದು ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಗೆ ದಾಖಲಿಸಿದ್ದರು. ಸತತ ಐದು ದಿನಗಳ ಕಾಲ ಚಿಕಿತ್ಸೆ ನೀಡಿದ ಬಳಿಕ, ಮಗು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 24ರಂದು ಡಿಸ್ಚಾರ್ಜ್ ಮಾಡಲು ವೈದ್ಯರು ಸೂಚಿಸಿದ್ದರು.

ಮಗುವಿನ ತಂದೆ ವಿಜಯ್ ಕುಮಾರ್ ಅವರು ಬಿಲ್ಲಿಂಗ್ ಕೌಂಟರ್ನಲ್ಲಿ ಹಣ ಪಾವತಿಸಲು ಹೋಗಿದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಮಗುವಿನ ಕೈಗೆ ಹಾಕಲಾಗಿದ್ದ ಡ್ರಿಪ್ಸ್ನ ಬ್ಯಾಂಡೇಜ್ (ಡ್ರೆಸ್ಸಿಂಗ್) ತೆಗೆಯುವಾಗ, ನರ್ಸ್ ಕತ್ತರಿಯನ್ನು ಅಜಾಗರೂಕತೆಯಿಂದ ಬಳಸಿದ್ದಾರೆ. ಈ ವೇಳೆ ಮಗುವಿನ ಎಡಗೈ ಕಿರುಬೆರಳಿನ ಅರ್ಧ ಭಾಗ ಕಟ್ ಆಗಿದೆ.

ದೂರಿನಲ್ಲಿ ಏನಿದೆ?

ಘಟನೆ ಸಂಬಂಧ ಮಗುವಿನ ತಂದೆ ವಿಜಯ್ ಕುಮಾರ್ ಪೊಲೀಸ್ ದೂರು ದಾಖಲಿಸಿದ್ದು, ಡ್ರೆಸ್ಸಿಂಗ್ ತೆಗೆಯುವಾಗ ನರ್ಸ್ ತೋರಿದ ಅತಿಯಾದ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ. ಬೆರಳು ಕಟ್ ಆದ ತಕ್ಷಣ ಮಗುವನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಡ್ರೆಸ್ಸಿಂಗ್ ಮಾಡಲಾಗಿದೆ. ಆದರೆ ಆಸ್ಪತ್ರೆ ಮಂಡಳಿಯು “ಇದೊಂದು ಸಣ್ಣ ಗಾಯ, ಮಗು ಬೆಳೆದಂತೆ ತಾನಾಗಿಯೇ ವಾಸಿಯಾಗುತ್ತದೆ” ಎಂದು ಹಾರಿಕೆ ಉತ್ತರ ನೀಡುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಕ್ರಮಕ್ಕೆ ಆಗ್ರಹ

ಘಟನೆಗೆ ಕಾರಣರಾದ ನರ್ಸ್, ಸಂಬಂಧಪಟ್ಟ ವೈದ್ಯರು ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಸದ್ಯ ನೋವಿನಿಂದ ನರಳುತ್ತಿರುವ ಕಂದಮ್ಮನ ಸ್ಥಿತಿ ಕಂಡು ಪೋಷಕರು ಕಣ್ಣೀರು ಹಾಕುತ್ತಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHOCKING: 6-month-old baby's finger cut off due to nurse's negligence in Bengaluru: FIR filed against hospital!
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.