ಛಿಂದ್ವಾಡ: ಮಧ್ಯ ಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನ ಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೇರಿದೆ.
ಇದಕ್ಕೂ ಮೊದಲು, ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೋಲ್ಮೀಫ್ ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟಿದ್ದರು. ಮಧ್ಯಪ್ರದೇಶದ ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ಮಂಗಳವಾರ (ಅಕ್ಟೋಬರ್ 7, 2025) ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 20 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಐದು ಮಕ್ಕಳು ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
20 ಮಕ್ಕಳಲ್ಲಿ 17 ಮಕ್ಕಳು ಚಿಂದ್ವಾರ ಜಿಲ್ಲೆಯವರು, ಇಬ್ಬರು ಬೇತುಲ್ನವರು ಮತ್ತು ಒಬ್ಬರು ಪಂಧುರ್ನಾದವರು. ಕೆಲವು ದೊಡ್ಡ ಮಕ್ಕಳು ಚೇತರಿಸಿಕೊಂಡಿದ್ದಾರೆ, ಮಧ್ಯಪ್ರದೇಶ ಪೊಲೀಸರು ಚಿಂದ್ವಾರಾದ ಪರಾಸಿಯಾದಲ್ಲಿ ಸರ್ಕಾರಿ ಮಕ್ಕಳ ತಜ್ಞ ಪ್ರವೀಣ್ ಸೋನಿ ಅವರನ್ನು ಸಹ ಬಂಧಿಸಿದ್ದಾರೆ ಅನೇಕ ಮಕ್ಕಳಿಗೆ ಔಷಧಿಯನ್ನು ಶಿಫಾರಸು ಮಾಡಿದ್ದಕ್ಕಾಗಿ, ತಯಾರಕರ ವಿರುದ್ಧ ಪ್ರಕರಣ ದಾಖಲಿಸಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದಾರೆ.