ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಂಟೇನರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಶಾಕಿಂಗ್ ವರದಿಯೊಂದು ಬಹಿರಂಗವಾಗಿದೆ.
ಹೌದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಂಟೈನೇರ್ ಪಲ್ಟಿಯಾಗಿ ನಿನ್ನೆಯಷ್ಟೇ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದು, ಇದೀಗ ಶಾಕಿಂಗ್ ರಿಪೋರ್ಟ್ ವೊಂದು ಬಹಿರಂಗವಾಗಿದ್ದು, ಪ್ರಸಕ್ತ ವರ್ಷ 148 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ ಎನ್ನಲಾಗಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿ.ಬೇಗೂರು ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ವಿಜಯಪುರ ಮೂಲದ ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)) ಸಾವನ್ನಪ್ಪಿದ್ದಾರೆ.