ಚಾಮರಾಜನಗರ : ಕಡಿಮೆ ರಕ್ತದೊತ್ತಡದಿಂದ ಕುಸಿದುಬಿದ್ದು 6 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದ ನಿವಾಸಿ ಮಹೇಶ್ ಪುತ್ರ ಆರ್ಯ (6) ಮೃತ ಬಾಲಕ. ಈತ 1ನೇ ತರಗತಿ ಓದುತ್ತಿದ್ದ. ಸೋಮವಾರ ಶಾಲೆಗೆ ಹೋಗಿ ಸಂಜೆ ವಾಪಸ್ ಮನೆಗೆ ಬಂದಿದ್ದಾನೆ. ಅನಂತರ ಸ್ವಲ್ಪ ಸಮಯದಲ್ಲಿಯೇ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಪಾಲಕರು ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಬಾಲಕ ರಕ್ತದ ಒತ್ತಡ ಕಡಿಮೆಯಾಗಿ ಮನೆಯಲ್ಲಿಯೇ ಮೃತಪಟ್ಟಿದ್ದಾನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಆರ್.ಸ್ವಾಮಿ ಸ್ಪಷ್ಟಪಡಿಸಿದ್ದಾರೆ.