ಇತ್ತೀಚೆಗೆ ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತೆಲಂಗಾಣದ ಚೆನ್ನೂರು ಪಟ್ಟಣದ ಪದ್ಮನಗರ ಕಾಲೋನಿಯ ನಿವೃತಿ(12) ಎಂಬ ಬಾಲಕಿ ಬೆಳಗ್ಗೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದೆ. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ನಿವೃತಿ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಆ
ನಿವೃತಿ 6ನೇ ತರಗತಿ ಓದುತ್ತಿದ್ದಳು. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವುದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.