ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಒಂದೇ ವರ್ಷದಲ್ಲೇ ಬರೋಬ್ಬರಿ 958 ಮಂದಿ ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಒಂದು ವರ್ಷದಲ್ಲಿ 958 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದು, ನಕಲಿ ವೈದ್ಯರ ಕ್ಲಿನಿಕ್‌ಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚಿರುವ ವಿವರಗಳನ್ನು ಹಂಚಿಕೊಂಡಿದೆ.
ಬೀದರ್ ಜಿಲ್ಲೆ ಒಂದರಲ್ಲೇ 213 ಮಂದಿ ಪತ್ತೆಯಾಗಿದ್ದಾರೆ. ಒಟ್ಟು 442 ಮಂದಿ ನಕಲಿ ವೈದ್ಯರಿಗೆ ನೋಟಿಸ್ ನೀಡಿ 163 ಕ್ಲಿನಿಕ್‌ಗಳನ್ನು ಈಗಾಗಲೇ ಮುಚ್ಚಿಸಲಾಗಿದೆ. 67 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.