ಬೀದರ್ : ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ. ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಲಕಿ ಸೋನಿ (15) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.