ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ ಮುಜಾಮಿಲ್ ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಹೃದಯಾಘಾತವೇ ಸಾವಿಗೆ ಕಾರಣ ಎನ್ನಲಾಗಿದೆ.








