ಮಧ್ಯಪ್ರದೇಶ : ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಹಾಡಹಗಲೇ ನಡು ರಸ್ತೆಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯ ತಲೆಯನ್ನು ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಸಹಜವಾಗಿ ಸ್ಥಳೀಯ ಜನರನ್ನು ಬೆಚ್ಚಿ ಬೀಳಿಸಿದೆ.
ಹೌದು ಮಧ್ಯಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.
ರಸ್ತೆಯ ತುಂಬೆಲ್ಲಾ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಘಟನಾ ಸ್ಥಳಕ್ಕೆ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ನಡುರಸ್ತೆಯಲ್ಲಿ, ಅದೂ ಹಗಲು ಹೊತ್ತಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಇಷ್ಟು ಭೀಕರವಾಗಿ ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶವನ್ನು ಮೂಡಿಸಿದೆ. ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯೇ ಅಥವಾ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ್ದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.








