ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿದ್ದು, ಬಾಲಕನ ಮುಖ, ತಲೆ ಮತ್ತು ಕುತ್ತಿಗೆಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಅಂದ್ರೂನ್ ಖಿಲ್ಲಾದಲ್ಲಿ ನಡೆದಿದೆ.
ಹೌದು 4 ವರ್ಷದ ಬಾಲಕನ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ನೌಮಾನ್ ಎನ್ನುವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿದ್ದು, ಮುಖ, ತಲೆ ಕತ್ತಿನ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ರಾಯಚೂರಿನ ಅಂದ್ರೂನ್ ಖಿಲ್ಲಾದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿನಾಯಿಗಳಿಗೆ ಕಡಿವಾಣ ಹಾಕದ್ದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ. ಪದೇಪದೇ ದಾಳಿ ಮಾಡುತ್ತಿದ್ದರು ಕೂಡ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಸದ್ಯ ಗಾಯಾಳು ಬಾಲಕ ನೌಮಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.