ಶಿವಮೊಗ್ಗ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಯುವಜನತೆ ಈ ಒಂದು ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಹೋಟೆಲ್ ನಲ್ಲಿ ತಿಂಡಿ ತಿಂದು ಇನ್ನೇನು ಕೆಲಸಕ್ಕೆ ಹೋಗಬೇಕು ಎನ್ನುವಷ್ಟರಲ್ಲಿ ಬ್ಯಾಂಕ್ ವ್ಯವಸ್ಥಾಪಕರು ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಕೆ.ಎನ್.ರವಿಕುಮಾರ್ (45) ಎಂದು ಗುರುತಿಸಲಾಗಿದೆ. ಇಂದು ರವಿಕುಮಾರ್ ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ಏರಿ ಹೊರಟ ವ್ಯಕ್ತಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಇವರು ತಾಲ್ಲೂಕಿನ ಕಾರಣಗಿರಿಯ ಪ್ರಗತಿ ಗ್ರಾಮೀಣ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಪಟ್ಟಣದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಕೆ.ಎನ್. ರವಿಕುಮಾರ್ ಅವರು ಬೆಳಿಗ್ಗೆ ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ನಲ್ಲಿ ಹೊರಡಲು ಅಣಿಯಾಗುತ್ತಿದ್ದಂತೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ.