ಮೈಸೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಮೈಸೂರಿನ ಸಾಲಿಗ್ರಾಮದಲ್ಲಿ ಘೋರ ದುರಂತ ಸಂಭವಿಸಿದೆ ತಾಯಿ ಒಬ್ಬಳು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲಿನಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.
ಮೂರು ವರ್ಷದ ಧೃತಿ ಹಾಗೂ ಒಂದುವರೆ ವರ್ಷದ ದಿಶಾ ಎನ್ನುವ ಮಕ್ಕಳನ್ನು ಕೊಲೆ ಮಾಡಲಾಗಿದೆ. ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ಬಳಿಕ ತಾಯಿ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ವಿಷಯ ತಿಳಿದ ತಕ್ಷಣ ಸ್ಥಳೀಯರು ತಾಯಿ ಪ್ರಿಯಾಂಕಳನ್ನು ರಕ್ಷಣೆ ಮಾಡಿದ್ದಾರೆ ಮೈಸೂರಿನ ಖಾಸಗಿ ಹಾಸ್ಪಿಟಲ್ಗೆ ಶಿಫ್ಟ್ ಮಾಡಲಾಗಿದೆ. ಆರು ವರ್ಷದ ಹಿಂದೆ ಪ್ರಿಯಾಂಕ ಮತ್ತು ಅನಿಲ್ ಕುಮಾರ್ ಮದುವೆ ಆಗಿತ್ತು.ಆದರೆ ಈ ರೀತಿ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಪರಿಸ್ಥಿತಿ ಯಾವ ಕಾರಣಕ್ಕೆ ಬಂದಿತು ಎಂದು ತಿಳಿದು ಬಂದಿಲ್ಲ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








