ತೆಲಂಗಾಣದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಕರುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ತೆಲಂಗಾಣದ ಮೇಡಕ್ ಜಿಲ್ಲೆಯ ಚಿನ್ನಶಂಕರಂಪೇಟೆ ಮಂಡಲದಲ್ಲಿ ಬಿಹಾರದ ವ್ಯಕ್ತಿಯೊಬ್ಬ ಕರುವಿನ ಮೇಲೆ ಅತ್ಯಾಚಾರ ಮಾಡಿದ ಘಟನೆ ಮೇಡಕ್ ಜಿಲ್ಲೆಯ ನಡೆದಿದೆ.
ಮಂಡಲ ಪ್ರದೇಶದ ಮಿರ್ಜಾಪಲ್ಲಿ ಗ್ರಾಮದ ನಿವಾಸಿ ಮಲ್ಲಕ್ಕೋಳ ಸಿದ್ಧಿರಾಮುಲು ಎಂಬಲ್ಲಿ ಬಿಹಾರದ ವ್ಯಕ್ತಿಯೊಬ್ಬ ಕರುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವುದನ್ನು ಗಮನಿಸಿದ ಮಾಲೀಕ ಸಿದ್ಧಿರಾಮುಲು, ಆರೋಪಿಯನ್ನು ಹಿಡಿದು, ದೈಹಿಕವಾಗಿ ಹಲ್ಲೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ ನಾರಾಯಣ ಗೌಡ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಪೊಲೀಸರ ಪ್ರಕಾರ, ಬಿಹಾರದ ರೋಹಿತ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆಯ ಸಮಯದಲ್ಲಿ, ಒಂದು ವರ್ಷದ ಕರುವಿನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ಹೇಳಿದರು.







