ಬೆಂಗಳೂರು : ಬೆಂಗಳೂರಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದ್ದು ಹೃದಯಾಘಾತಕ್ಕೆ ರೈತ ಈಶ್ವರ (50) ಸಾವನ್ನಪ್ಪಿದ್ದಾರೆ. ಇವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾಗಿದ್ದು, ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರೈಲು ಇಳಿದು ಫ್ರೀಡಂ ಪಾರ್ಕ್ ಗೆ ತೆರಳುತ್ತಿದ್ದರು.
ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿಯೇ ಈಶ್ವರ ಕುಸಿದು ಬಿದಿದ್ದಾರೆ. ಧರಣಿಯಲ್ಲಿ ಪಾಲ್ಗೊಳ್ಳುವ ತೆರಳುವಾಗ ರೈತ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಅಪೋಲೋ ಆಸ್ಪತ್ರೆಗೆ ಸಾಗಿಸುವಾಗಲೇ ಮಾರ್ಗ ಮಧ್ಯೆ ರೈತ ಸಾವನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಹೃದಯಘಾತದಿಂದ ಸಾವನ್ನಪ್ಪಿರುವ ಮಾಹಿತಿ ತಿಳಿದು ಬಂದಿದೆ.