ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಕತ್ತು ನವಜಾತ ಶಿಶು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಆಕೆಗೆ ಹೆರಿಗೆಯಾಗಿದೆ. ತಂದೆ, ತಾಯಿ, ಅಜ್ಜಿ ಮತ್ತು ಮೂವರು ಮಹಿಳೆಯರ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡ ಯುವತಿಗೆ ಗಂಡು ಮಗು ಜನಿಸಿದೆ.
ಮನೆಯವರೆಲ್ಲಾ ಸೇರಿ ಹಸುಗೂಸು ಕಣ್ಣು ಬಿಡುವ ಮೊದಲೇ ಆಕೆಯ ಅಜ್ಜಿ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ನಂತರ ಮಗುವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದರು ಎನ್ನಲಾಗಿದೆ. ಈ ಕುರಿತು ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








