ಬೆಂಗಳೂರು : ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮಂಜುನಾಥ್ (44) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಜುನಾಥ್ ಹಲವು ವರ್ಷಗಳಿಂದ ಮದುವೆಯಾಗಲು ಪ್ರಯತ್ನಿಸಿದರೂ ಹೆಣ್ಣು ಸಿಕ್ಕಿರಲಿಲ್ಲ. ಹೆಣ್ಣು ಕೇಳಲು ಹೋದಾಗ ವಿದ್ಯಾರ್ಹತೆ, ಉದ್ಯೋಗ ಮತ್ತು ಸ್ವಂತ ಮನೆಯ ಬಗ್ಗೆ ಪ್ರಶ್ನಿಸುತ್ತಿದ್ದರು. ವಯಸ್ಸು ಮೀರಿದಂತೆ ಆಪ್ತರಿಂದ ಮದುವೆ ಯಾವಾಗ ಎಂಬ ಪ್ರಶ್ನೆಗಳು ಮಾನಸಿಕ ಒತ್ತಡಕ್ಕೆ ಕಾರಣವಾಗಿದ್ದು, ಶನಿವಾರ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.