ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಪ್ರಥಮ ವರ್ಷದ ಬಿ-ಫಾರ್ಮಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ, ಬೀದರ್‌ನ ನೌಬಾದ್‌ನಲ್ಲಿರುವ ಬಿಸಿಎಂ ವಸತಿ ನಿಲಯದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ನವನಾಥ ಬಾಜೀರಾವ್ ದೊಂಡಿಬಾ ಎಂದು ತಿಳಿದುಬಂದಿದೆ.ನವನಾಥ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.ಭಾಲ್ಕಿ ತಾಲೂಕಿನ ಲಖನಗಾಂವ್ ಗ್ರಾಮದ ದೊಂಡಿಬಾ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ನಿನ್ನೆಯಷ್ಟೇ ಬಿ-ಫಾರ್ಮಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದಿದ್ದು ಊರಿಗೆ ಬರ್ತೀನಿ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾನೆ.
ಆದ್ರೆ, ಊರಿಗೆ ಹೋಗುವುದಕ್ಕೂ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅವರ ಸಹಪಾಠಿಗಳು ಹೇಳಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.