ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀದಿ ನಾಯಿಗಳ ದಾಳಿಯಿಂದಾಗಿ 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಮಪುರ ಗ್ರಾಮದ ಕೊಂಡಾಪುರ ಬಳಿ ಬೀದಿ ನಾಯಿಗಳ ದಾಳಿಗೆ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಕೊಂಡಾಪುರ ಬಳಿ ಟ್ಯೂಶನ್ ಗೆ ಹೋಗಿ ಬರುತ್ತಿದ್ದ ಸಿ.ಮಿಥುನ್ (11) ಮೇಲೆ ಬೀದಿನಾಯಿಗಳ ದಾಳಿ ನಡೆಸಿದ್ದು, ತಲೆ, ಎದೆ, ಕೈಕಾಲು ಸೇರಿ ಎಲ್ಲೆಡೆ ಕಚ್ಚಿ ಗಾಯಗೊಳಿಸಿದ್ದು, ಕೂಡಲೇ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಚಿಕಿತ್ಸೆ ಫಲಿಸದೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಘಟನೆ ಸಂಬಂಧ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.