ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಿಂದಾಗಿ ಮನೆಯಲ್ಲಿ ಮಲಗಿದ್ದ ಆರು ಮಂದಿ ಸಜೀವ ದಹನವಾಗಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು (ಡಿಸೆಂಬರ್ 18) ಮುಂಜಾನೆ ಕಥುವಾದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯ ಕುರಿತು ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು.