ಚಿಕ್ಕಮಗಳೂರು : ರಾಜ್ಯದ ಹಾಸನ ಜಿಲ್ಲೆ ಒಂದರಲ್ಲಿ ಕಳೆದ 40 ದಿನಗಳಲ್ಲಿ ಒಟ್ಟು ಇದುವರೆಗೂ 25 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಇದೀಗ ರಾಜ್ಯದಲ್ಲಿ ಹೃದಯಾಘಾತ ಸರಣಿ ಮುಂದುವರೆದಿದ್ದು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಮಾತ್ರೆ ತೆಗೆದುಕೊಳ್ಳುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಚಿಕ್ಕಮಂಗಳೂರಿನಲ್ಲೂ ಕೂಡ ಹೃದಯಾಘಾತ ಆತಂಕ ಸೃಷ್ಟಿಸಿದ್ದು, ಮೆಡಿಕಲ್ ನಲ್ಲಿ ಮಾತ್ರೆ ಖರೀದಿಸುವಾಗಲೇ ವ್ಯಕ್ತಿಯೊಬ್ಬರಿಗೆ ಹೃದಯಘಾತವಾಗಿದೆ. ಮಾತ್ರೆ ಸೇವಿಸಲು ನೀರು ಬೇಡುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮೃತರು ಕೋಟೆ ಬಡಾವಣೆಯ ವಿಶ್ವನಾಥ್ (50) ಸಾವನಪ್ಪಿದ್ದಾರೆ.
ವಿಶ್ವನಾಥ್ ಅವರು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಜೂನ್ 26ರಂದು ದೀಪ ನರಸಿಂಗ್ ಹೋಂ ಬಳಿ ಈ ಒಂದು ಘಟನೆ ನಡೆದಿತ್ತು. ಹೃದಯಾಘಾರದಿಂದ ಸಾವನ್ನಪ್ಪಿದ್ದಾರೆ ಎಂದು ವೈದರು ಕೂಡ ದೃಢಪಡಿಸಿದ್ದಾರೆ. ಚಿಕ್ಕಮಗಳೂರಲ್ಲಿ ಎರಡು ತಿಂಗಳಲ್ಲಿ ಒಟ್ಟು 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.