ದಾವಣಗೆರೆ :ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ದುಷ್ಕರ್ಮಿಗಳು ವೃದ್ದೆಯನ್ನು ಕೊಲಗೈದು 73 ಗ್ರಾಂ.ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಬಳಿಯಿದ್ದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಘಟನೆಯ ಹಿನ್ನೆಲೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯ ವೃದ್ದೆ ಕೊಲ್ಲಾರಿ ಕಮಲಮ್ಮ (64) ಅವರು ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಘಟನೆ ನಡೆದ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.








