ಮೈಸೂರು : ಮೈಸೂರಿನಲ್ಲಿ ಭೀಕರ ಹತ್ಯೆಯೊಂದು ನಡೆದಿದ್ದು, ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಪತಿಯೋರ್ವ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ.
ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪಾಪಣ್ಣ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ.
ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನು ಪೀಡಿಸುತ್ತಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿ ಗಾಯತ್ರಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ತನಿಖೆ ಕೈಗೊಂಡಿದ್ದು, ಸದ್ಯ ಪಾಪಣ್ಣನನ್ನ ಪೊಲೀಸರು ಬಂಧಿಸಿದ್ದಾರೆ.