ಕಾಸರಗೋಡು : ಸಾಮಾನ್ಯವಾಗಿ ಊಟ ಮಾಡುವಾಗ, ಅಥವಾ ಏನೇ ತಿನ್ನುವಾಗಲು ನಿಧಾನಕ್ಕೆ ತಿನ್ಬೇಕು ಇಲ್ಲವಾದರೆ ನಮ್ಮ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಇದೀಗ ಅಂತದ್ದೆ ಘಟನೆಯೊಂದು ನಡೆದಿದ್ದು, ಆಮ್ಮೆಟ್ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಅವರು ರವಿವಾರ ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಮೆಟ್ ಸೇವಿಸುತ್ತಿದ್ದಾಗ ಘಟನೆ ನಡೆದಿದೆ.ಆಮ್ಮೆಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾತಾದರೂ ಅಷ್ಟರಲ್ಲಿ ಅವರು ಮೃತಪಾತ್ತಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದರು.
ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು..ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಏನೇ ತಿನ್ನುವಾಗಲು ನಿಧಾನಕ್ಕೆ ತಿನ್ನಬೇಕು ಇಲ್ಲವಾದರೆ ಇಂತಹ ದುರ್ಘಟನೆಗಳು ಸಂಭವಿಸುತ್ತವೆ.