ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೂಡಸಂದ್ರ ಬಳಿ ಈ ಒಂದು ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚೂಡಸಂದ್ರ ಎಂಬಲ್ಲಿ ಆಂಧ್ರಪ್ರದೇಶ ಮೂಲದ ನಂದಿನಿ (23) ಎಂಬ ಯುವತಿ ಸಾವನಪ್ಪಿದ್ದಾಳೆ.
ಸ್ನೇಹಿತರ ಜೊತೆ ನಿರ್ಮಾಣ ಹಂತದ ಕಟ್ಟಡದ ಮೇಲೆ ಯುವತಿ ಮದ್ಯಪಾನ ಮಾಡಲು ತೆರಳಿದ್ದಳು. ನಿರ್ಮಾಣ ಹಂತದ ಕಟ್ಟಡದಲ್ಲಿ ತನ್ನ ಸ್ನೇಹಿತರ ಜೊತೆಗೂಡಿ ಮದ್ಯಪಾನ ಮಾಡಲು ಮುಂದಾಗಿದ್ದಳು. ಈ ವೇಳೆ ಸ್ನೇಹಿತರ ಜೊತೆ ನಂದಿನಿ ಕುಡಿದು ರೀಲ್ಸ್ ಮಾಡಿದ್ದಾಳೆ. ನಂತರ ಆಯತಪ್ಪಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳನ್ನು ಆಂಧ್ರಪ್ರದೇಶ ಮೂಲದ ನಂದಿನಿ (23) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ಸ್ನೇಹಿತರ ಜೊತೆ ಕಟ್ಟಡದ ಮೇಲೆ ಹೋಗಿದ್ದಳು. ಈ ವೇಳೆ ದುರಂತ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.