ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ.
ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಓರ್ವ ಬಾಲಕ ಹಾಗೂ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಶಿವಮ್ಮ ರಾಜೂ ರಾಠೋಡ್ (8), ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂ ಸ್ವಪ್ನಾ ರಾಜೂ ರಾಠೋಡ್ (12) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಕುರಿಗಳ ಜೊತೆಗೆ ಆಟ ಆಡುತ್ತಾ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.